ಮೈಸೂರು :ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆ ಮಾಡಿದೆ. ಅಧಿದೇವತೆ ಚಾಮುಂಡಿ ಸನ್ನಧಿಯಲ್ಲಿ ಮೂರನೇ ಆಷಾಢ ಶುಕ್ರವಾರದ ವಿಶೇಷ ಪುಜೆ ಪುರಸ್ಕಾರ ಮುಂಜಾನೆಯಿಂದಲೇ ಆರಂಭವಾಗಿದೆ. ಆಷಾಢದಲ್ಲಿ ಲಕ್ಷ್ಮೀ, ಶಕ್ತಿ ದೇವತೆಗಳ ಆರಾಧನೆ ನಡೆಯುತ್ತಿದ್ದು, ಚಾಮುಂಡೇಶ್ವರಿ ದೇವಿಗೂ ವಿಶೇಷ ಪೂಜೆ ನಡೆದಿದೆ.
ಮೂರನೇ ಶುಕ್ರವಾರ ಹಿನ್ನಲೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.ಆಷಾಡ ಮಾಸದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಹರಿದು ಬರುತ್ತಿದ್ದಾರೆ.ಎಂದಿನಂತೆ ಮುಂಜಾನೆ 3.30 ಕ್ಕೆ ಪೂಜಾ ಕೈಂಕರ್ಯಗಳು ಆರಂಭವಾಗಿದ್ಷು,ಮಹಾ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರಗಳನ್ನು ಮಾಡಲಾಗಿದೆ. ಭಕ್ತರು ಸರತಿಸಾಲಿನಲ್ಲಿ ನಿಂತು ದೇವರ ದರ್ಶನ ಮಾಡುತ್ತಿದ್ಷಾರೆ.