ಗದಗ: ಜನರ ಮನಸ್ಸನ್ನ ಕೆಡಿಸಿ ಗೊಂದಲಸೃಷ್ಠಿ ಮಾಡಿ ರಾಜಕೀಯ ಲಾಭ ಪಡೆಯುವ ಬಿಜೆಪಿ ಪ್ರಯತ್ನ ವಿಫಲ ಎಂದು ಸಚಿವ ಹೆಚ್.ಕೆ.ಪಾಟೀಲ ಹೇಳಿದ್ದಾರೆ. ಅಕ್ಕಿ ಹೊಂದಿಸಲು ಕೈಲಾಗದ ಸಿಎಂ ಎಂಬ ಬಿಜೆಪಿ ಟ್ವೀಟ್ಗೆ ತಿರುಗೇಟು ನೀಡಿದ ಅವರು,
ಅಕ್ಕಿ ಹೊಂದಿಸಲು ಆಗದಂತೆ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ಕೇಂದ್ರ ಸರ್ಕಾರ. ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡಿ ಆದರೆ ರಾಜ್ಯ ಸರ್ಕಾರಕ್ಕೆ ಅಕ್ಕಿ ಕೊಡಬೇಡಿ. ಇಂತಹ ನಿಲುವಿಗೆ ಆ ಪಕ್ಷದ ನಾಯಕರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.