ಬೆಂಗಳೂರು:- ಕೇಂದ್ರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ನೀಡುವಂತೆ ರಾಜ್ಯ ಬಿಜೆಪಿ ನಾಯಕರು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೆಚ್ಚುವರಿ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಮೊದಲು ಭಾರತೀಯ ಆಹಾರ ನಿಗಮ ಅಕ್ಕಿ ನೀಡುವುದಾಗಿ ಹೇಳಿತ್ತು. ಜೂನ್ 12ರಂದು ಎಫ್ಸಿಐ ಕೂಡ ಪತ್ರ ಬರೆದಿತ್ತು. ಆದರೆ ಇದೀಗ ಎಫ್ಸಿಐ ಅಕ್ಕಿ ನೀಡಲಾಗಲ್ಲ ಎಂದು ಪತ್ರ ಬರೆದಿದೆ. ಬಡವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಯಾಕೆ? ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು.
ನಮ್ಮ ರಾಜ್ಯದಲ್ಲಿ ಅಕ್ಕಿ ಇಲ್ಲ. ಅಕ್ಕಿ ಇದ್ದರೆ ಕೊಡಿಸಿ ನೀವೇ ಎಂದು ಹೇಳಿದ ಸಿದ್ದರಾಮಯ್ಯ, ರಾಯಚೂರಿನಲ್ಲಿ ಸೋನಾ ಮಸೂರಿ ಇರುವುದು. ಅದು ಒಂದು ಕೆ.ಜಿಗೆ 55 ರೂಪಾಯಿ ಅಂತ ಹೇಳುವ ಮೂಲಕ ರಾಜ್ಯದ ರೈತರಿಂದ ಅಕ್ಕಿ ಖರೀದಿಸಲ್ಲ ಅಂತ ಪರೋಕ್ಷವಾಗಿ ಹೇಳಿದರು.