ಬೆಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಒಂದಾಗಿತ್ತು ಆದರೆ ಈಗ ರಾಜ್ಯ ಸರ್ಕಾರಕ್ಕೆ ಅನ್ನಭಾಗ್ಯ ಅಕ್ಕಿ ನೀಡಲು ಎಫ್ಸಿಐ ತಿರಸ್ಕರಿಸಿದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಅವರ ಮಾತಿಗೆ ನನ್ನ ಸಂಪೂರ್ಣ ಸಹಮತವಿದೆ.
ಬಡವರಿಗೆ ಸಹಾಯ ಮಾಡುವ ವಿಚಾರಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು. ಅವರ ಈ ಧೋರಣೆ ಅವರು ಯಾರ ಪರ ಇದ್ದಾರೆ ಎಂದು ತೋರಿಸುತ್ತೆ.
ನಾವು ಪುಕ್ಕಟ್ಟೆ ಕೊಡಿ ಎಂದು ಕೇಳಿಲ್ಲ, ಹಣ ಕೊಡ್ತೀವಿ. ಅದಕ್ಕೆ ಅವರು ನೀಡಬಹುದಿತ್ತು ಎಂದು ವಿಧಾನಸೌಧದಲ್ಲಿ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.