ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಕಾರಣಗಳಾಗಿದ್ದ ಐದು ಗ್ಯಾರಂಟಿ ಘೋಷಣೆಗಳು ದೊಡ್ಡ ಸದ್ದು ಗದ್ದಲಕ್ಕೆ ಕಾರಣವಾಗಿದ್ದವು. ಆದರೆ ಇದೀಗ ಅದರ ಜಾರಿಗೆ ಕೆಲವೊಂದು ಕಂಡೀಷನ್ಸ್ ಅಪ್ಲೈ ಆಗಲಿದೆ ಎಂದು ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಜಿ ಪರಮೇಶ್ವರ್ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲ ಕ್ಯಾಬಿನೆಟ್ ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ದರಾಗಿ ಇರುತ್ತೇವೆ ಹಾಗೂ ಮೊದಲ ಕ್ಯಾಬಿನೆಟ್ ನಲ್ಲಿ ಜಾರಿ ಮಾಡ್ತೀವಿ ಎಂದರು. ಗ್ಯಾರಂಟಿಗಳನ್ನ ಪ್ರಾಕ್ಟಿಕಲ್ ಆಗಿ ಜಾರಿ ಮಾಡುತ್ತೇವೆ. ಆಯಾ ಇಲಾಖೆ ಸಚಿವರು ಕೂತು ಇದರ ಬಗ್ಗೆ ವರ್ಕ್ ಮಾಡಿ ಜಾರಿ ಮಾಡ್ತೀವಿ. ಆದರೆ ಗ್ಯಾರಂಟಿಗಳಿಗೆ ಕಂಡಿಷನ್ ಇರುತ್ತದೆ. ಹಾಗೇ ಕೊಟ್ಟರೆ ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ ಎಂದರು.
ಇನ್ನು ಇದೇ ಸಂದರ್ಭದಲ್ಲಿ, ಸಿಎಂ ಆಯ್ಕೆ ವಿಚಾರವಾಗಿ ಮಾತನಾಡಿ, ಎಲ್ಲವೂ ಸುಸೂತ್ರವಾಗಿ ನಡೆಯಲಿದೆ. ಹೈಕಮಾಂಡ್ ಮಟ್ಟದಲ್ಲಿ ಈ ಕುರಿತಾಗಿ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರು ಕೂತು ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತಾರೆ. ನೀವು ಅಂದುಕೊಂಡ ಹಾಗೆ ದೊಡ್ಡ ಹೋರಾಟ ಆಗುವುದಿಲ್ಲ ಎಂದರು.