ಸರ್ಕಾರಿ ನೌಕರರ ಬೇಡಿಕೆಗಳಾದ ವೇತನ, ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಫೆಬ್ರವರಿ 21 ರಂದು ನಡೆದ ರಾಜ್ಯ ಕಾರ್ಯಕಾರಣಿ ಮತ್ತು ವೃಂದ ಸಂಘಗಳ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ಸರ್ಕಾರಿ ಅಧಿಕಾರಿಗಳು, ನೌಕರರು ಮಾರ್ಚ್ 1 ಇಂದಿನಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಮುಷ್ಕರ. ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು ಕಳೆದ ಮೇ 1 ರಿಂದ ಜಾರಿಗೆ ಬರುವಂತೆ ಶೇ.40 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಮುಷ್ಕರ ನಿರತರ ಒತ್ತಾಯವಾಗಿದೆ.