ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ವಿಜಯನಗರ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಮಳೆ ಆಗಲಿದೆ. ಮಾಗಡಿ, ವಿರಾಜಪೇಟೆ, ಚಿಂತಾಮಣಿ, ದೇವನಹಳ್ಳಿ, ಶಿಡ್ಲಘಟ್ಟ, ಚಂದೂರಾಯನಹಳ್ಳಿ, ಬೆಂಗಳೂರು ಎಚ್ಎಎಲ್, ಗೋಪಾಲ್ನಗರ, ಮಧುಗಿರಿ, ಗೋಣಿಕೊಪ್ಪಲ್, ಹರದನಹಳ್ಳಿ, ತೊಂಡೆಭಾವಿ, ಬೈಲಹೊಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ಕುಣಿಗಲ್, ಚಾಮರಾಜನಗರ, ಹೆಸರಘಟ್ಟ, ಬುಕ್ಕಾಪಟ್ಟಣ, ಮಲವಳ್ಳಿ, ಶ್ರವಣಬೆಳಗೊಳ, ಹಾರಂಗಿ, ಗೌರಿಬಿದನೂರಿನಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.