ಬೆಂಗಳೂರು; ನಗರ ಸೇರಿದಂತೆ ದಕ್ಷಿಣ ಒಳನಾಡಿನ ವ್ಯಾಪ್ತಿಯಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದ ಭಾಗದಲ್ಲಿ ಗುಡುಗು-ಮಿಂಚು ಸಹಿತ ಮಳೆಯ ಸಾಧ್ಯತೆ ಇದೆ.
ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆಯಾಗಲಿದೆ. ಹವಾಮಾನ ಇಲಾಖೆ ಕಡಲ ತೀರಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ.
ಇನ್ನೂ ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಶಹಾಪುರದಲ್ಲಿ ವರುಣನ ಅರ್ಭಟ ಹಿನ್ನೆಲೆ ರಸ್ತೆಗಳು ತುಂಬಿ ಹರಿದಿದ್ದು, ವಾಹನ ಸವಾರರು ಪರದಾಡಿದ್ರು.
ಬರದ ಆತಂಕದಿಂದ ಕಂಗಾಲಾಗಿದ್ದ ಉಡುಪಿ ನಗರದ ಜನರು ರಿಲಾಕ್ಸ್ ಆಗಿದ್ದಾರೆ. ಉಡುಪಿ ನಗರದ ಜೀವನದಿ ಸ್ವರ್ಣಾ ಮೈದುಂಬಿ ಹರಿಯುತ್ತಿದ್ದಾಳೆ. ಬಜೆ ಅಣೆಕಟ್ಟಿಗೆ ಸ್ವರ್ಣ ಒಳಹರಿವು ಆರಂಭ ಸದ್ಯ ಮೂರು ಮೀಟರ್ ನೀರು ಸಂಗ್ರಹವಾಗಿದ್ದು, ಇಂದಿನಿಂದ ನಗರಸಭಾ ವ್ಯಾಪ್ತಿಯ 35 ವಾರ್ಡ್ಗಳಿಗೆ ನಿರಂತರ ನೀರು ಸಿಗಲಿದೆ.