ಬೆಂಗಳೂರು:- ಕರ್ನಾಟಕದ ಉತ್ತರ ಒಳನಾಡು, ಕರಾವಳಿಯಲ್ಲಿ ಇಂದು ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ.
ಬೆಳಗಾವಿ, ಹಾವೇರಿಯಲ್ಲಿ ಸೋಮವಾರ ಮಳೆಯಾಗಿದೆ. ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್ಎಎಲ್ನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.