ರಾಯಪುರ: ಛತ್ತೀಸ್ಗಢನಅಬುಜ್ಮಾರ್ನಲ್ಲಿ ಅ.3ರಂದು ನಡೆದ ಎನ್ಕೌಂಟರ್ನಲ್ಲಿ 38 ಮಾವೋವಾದಿಗಳು ಹತರಾಗಿದ್ದು, ಬಸ್ತಾರ್ನಲ್ಲಿ ನಡೆದ ಅತೀ ದೊಡ್ಡ ಎನ್ಕೌಂಟರ್ ಇದಾಗಿದೆ.
ಶುಕ್ರವಾರ ದಂತೇವಾಡ ಪೊಲೀಸರು 9 ಗಂಟೆಗಳ ಕಾಲ ನಡೆಸಿದ ಗುಂಡಿನ ದಾಳಿಯಲ್ಲಿ ಒಟ್ಟು 38 ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ.
ಒಟ್ಟು 2.6 ಕೋಟಿ ರೂ.ಗೂ ಅಧಿಕ ಬಹುಮಾನವನ್ನು ಪಡೆದುಕೊಂಡಿದ್ದಾರೆ.
ಎನ್ಕೌಂಟರ್ ನಡೆದ ಒಂದು ದಿನದ ಬಳಿಕ 13 ಮಹಿಳೆಯರು ಸೇರಿದಂತೆ 31 ಮಾವೋವಾದಿಗಳ ಶವವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅ.13 ರಂದು ಮಾವೋವಾದಿಗಳು ತಮ್ಮ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಹೇಳಿಕೆಯ ಪ್ರಕಾರ ಒಟ್ಟು 35 ಮಾವೋವಾದಿಗಳು ಸಾವನ್ನಪ್ಪಿದ್ದು, ಅವರ ಹೆಸರುಗಳನ್ನು ಬಹಿರಂಗಪಡಿಸಿದ್ದಾರೆ. ಬಳಿಕ ತಮ್ಮ ಬಳಿಯಿದ್ದ ಮಾವೋವಾದಿಗಳ ಪಟ್ಟಿಯನ್ನು ಹಾಗೂ ಬಿಡುಗಡೆಗೊಳಿಸಿದ ಪಟ್ಟಿಯನ್ನು ತಾಳೆ ಮಾಡಿದಾಗ 7 ಹೆಚ್ಚುವರಿ ಹೆಸರಿರುವುದು ಗಮನಕ್ಕೆ ಬಂದಿದೆ.