ಬೆಂಗಳೂರು: ಕಾಂಗ್ರೆಸ್ನವರದ್ದು ಚೈನಾ ಬಜಾರ್ ಗ್ಯಾರಂಟಿ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಸರ್ಕಾರ ರಚನೆಗೂ ಮುನ್ನವೇ ಗ್ಯಾರಂಟಿ ಬಗ್ಗೆ ಅಪಸ್ವರ ಶುರುವಾಗಿದೆ. ಹಲವೆಡೆ 200 ಯುನಿಟ್ ವಿದ್ಯುತ್ ಬಿಲ್ ಕಟ್ಟಲ್ಲ ಅಂತಿದ್ದಾರೆ.
ತೆರಿಗೆ ಕಟ್ಟುವವರಿಗೆ ಗ್ಯಾರಂಟಿ ಅನ್ವಯ ಆಗಲ್ಲ ಅಂತಾ ಡಾ.ಜಿ.ಪರಮೇಶ್ವರ್ ಹಾಗೂ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಡೆಲ್ಲಿ ಮಾಲ್ ಹಾಗೇ, ಅದು ಯಾವುದೇ ಉಪಯೋಗಕ್ಕೆ ಬರಲ್ಲ. ಕಾಂಗ್ರೆಸ್ನದ್ದು ಸುಳ್ಳು ಭರವಸೆ ಅಂತ ಸ್ಪಷ್ಟವಾಗಿದೆ ಎಂದರು.