ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಕೊಡುಗೆಯನ್ನು ಘೋಷಿಸಿರುವ ಸಿದ್ದ ಸರ್ಕಾರ ಹಲವು ವರ್ಷಗಳ ಬೇಡಿಕೆಯೊಂದನ್ನ ಈಡೇರಿಸಿದೆ. ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಸಿದ್ದು ಸರ್ಕಾರ ಈಡೇರಿಸಿದೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸುವುದಾಗಿ ಈ ಬಾರಿಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ಚಿತ್ರರಂಗದ ಬೆಳವಣಿಗೆ ಇತಿಹಾಸ ಪರಿಚಯಿಸಲು ಮುಂದಾಗಿದ್ದಾರೆ.
ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ.