ತೆಲಂಗಾಣದಲ್ಲಿ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಕೆಲ ದಿನಗಳ ಕಾಲ ಬಂದ್ ಮಾಡಲಾಗಿದೆ. ಕ್ರಿಕೆಟ್, ಎಲೆಕ್ಷನ್ ಸ್ಟಾರ್ ಸಿನಿಮಾಗಳ ಕೊರತೆ ಇನ್ನಿತರೆ ಕಾರಣಗಳಿಂದ ಚಿತ್ರಮಂದಿರಗಳಿಗೆ ಜನ ಬರುವುದು ಕಮ್ಮಿಯಾಗಿದೆ. ಇದರಿಂದ ಮಾಲಿಕರು ತೀವ್ರ ಸಂಕಷ್ಟು ಎದುರಿಸುತ್ತಿದ್ದಾರೆ. ಇದರಿಂದ ಚಿತ್ರಮಂದಿರಗಳನ್ನು ಕೆಲ ದಿನಗಳ ಕಾಲ ಬಂದ್ ಮಾಡಲಾಗಿದೆ.
ತೆಲಂಗಾಣದಂತೆ ಕರ್ನಾಟಕದಲ್ಲಿಯೂ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಬಂದ್ ಮಾಡಬೇಕು ಎಂಬ ಚರ್ಚೆ ಕೇಳಿ ಬಂದಿದೆ. ಈ ವಿಚಾರವಾಗಿ ಚಿತ್ರರಂಗದ ಪ್ರಮುಖರ ಸಭೆ ನಡೆದಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ ಸುರೇಶ್ ಚಿತ್ರಮಂದಿರ ಬಂದ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಫಿಲಂ ಚೇಂಬರ್ ಕರೆದಿದ್ದ ಸಭೆಯಲ್ಲಿ ಚಿತ್ರರಂಗದ ಸಕ್ರಿಯ ನಿರ್ಮಾಪಕರು, ಹಿರಿಯ ನಿರ್ಮಾಪಕರನ್ನು ಸಭೆಗೆ ಕರೆಯಲಾಗಿತ್ತು. ಸಭೆಯಲ್ಲಿ ನಿರ್ಮಾಪಕ, ವಿತರಕ ಜಯಣ್ಣ, ನಿರ್ಮಾಪಕ, ನಿರ್ದೇಶಕ ಆರ್ ಚಂದ್ರು, ಕೆ ಮಂಜು, ಹೊಂಬಾಳೆ ನಿರ್ಮಾಣ ಸಂಸ್ಥೆಯ ಪ್ರತಿನಿಧಿ ಚಿದಾನಂದ್, ನಿರ್ಮಾಪಕ ತರುಣ್ ಶಿವಪ್ಪ, ಲಹರಿ ವೇಲು, ಕೆಪಿ ಶ್ರೀಕಾಂತ್ ಇನ್ನೂ ಕೆಲವರು ಭಾಗಿಯಾಗಿದ್ದರು. ಫಿಲಂ ಚೇಂಬರ್ನ ಅಧ್ಯಕ್ಷ ಎನ್.ಎಮ್.ಸುರೇಶ್ ಸೇರಿದಂತೆ ಇನ್ನೂ ಕೆಲವರು ಭಾಗಿಯಾಗಿದ್ದರು.
ಚಿತ್ರಮಂದಿರಗಳನ್ನು ಬಂದ್ ಮಾಡುತ್ತೀವಿ ಎಂದು ಈ ಹಿಂದೆಯೂ ನಾವು ಹೇಳಿರಲಿಲ್ಲ. ಚಿತ್ರರಂಗದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದೆವು, ಪ್ರದರ್ಶಕರನ್ನು ಹೇಗೆ ಉಳಿಸಿಕೊಳ್ಳಬೇಕು ಅನ್ನುವ ಬಗ್ಗೆ ಚರ್ಚೆಯಾಯಿತು. ಈ ವಿಷಯದ ಬಗ್ಗೆ ಸರ್ಕಾರದ ಜೊತೆ ಚರ್ಚೆ ಮಾಡ್ತಿವಿ ಎಂದು ತಿಳಿಸಿದ್ದಾರೆ. ಬಂದ್ ಅಂತ ಅನೌನ್ಸ್ ಮಾಡದೇ ಇದ್ದರು. ಆ ಸುದ್ದಿ ಹರಿದಾಡಿರೋದಕ್ಕೆ ಚಿತ್ರರಂಗದ ವ್ಯವಹಾರಕ್ಕೆ ತೊಂದರೆ ಆಗಿದೆ. ಓಟಿಟಿ ರೈಟ್ಸ್ಗೆ ಜೊತೆಗೆ ಬೇರೆ ಭಾಷೆಗಳಲ್ಲಿ ಸಿನಿಮಾಗಳ ಮಾರ್ಕೆಟ್ಗೆ ಸಮಸ್ಯೆ ಆಗುತ್ತಿದೆ ಎಂದು ತಿಳಿಸಿದರು. ಈ ಎಲ್ಲಾ ವಿಚಾರವನ್ನು ಸರ್ಕಾರದ ಗಮನಕ್ಕೆ ತರೋದಾಗಿ ಎನ್.ಎಂ ಸುರೇಶ್ ಹೇಳಿದರು.
ಸಿಜಿ ವರ್ಕ್, ಪೋಸ್ಟ್ ಪ್ರೋಡಕ್ಷನ್ನಿಂದ ಸಿನಿಮಾಗಳು ಲೇಟ್ ಆಗೋದಕ್ಕೆ ತೊಂದರೆ ಆಗುತ್ತಿದೆ. ಹೀಗಾಗಿ ಸ್ಟಾರ್ ನಟರ ಸಿನಿಮಾಗಳು ರಿಲೀಸ್ಗೆ ಲೇಟ್ ಆಗುತ್ತಿದೆ ಎಂದು ನಿರ್ಮಾಪಕರು ಹೇಳಿದ್ದಾರೆ. ಕೇರಳ ರಾಜ್ಯದಲ್ಲಿ ಮಾಡಿರುವ ರೀತಿ ನಮ್ಮಲ್ಲಿ ಅಭಿವೃದ್ಧಿ ಮಾಡುತ್ತೇವೆ. ಇದೀಗ ಕೇರಳ ಸರ್ಕಾರ ಅವರದ್ದೇ ಓಟಿಟಿ ಮಾಡಿದೆ. ಯುಎಫ್ ಓ, ಕ್ಯೂಬ್ ಅವರದ್ದೇ ಇದೇ ಕಡಿಮೆ ಬೆಲೆಗೆ ಪ್ರೊಸೆಸ್ ಮಾಡುತ್ತಿದ್ದಾರೆ. ಕರ್ನಾಟಕದಲ್ಲೂ ಇದೇ ರೀತಿ ವ್ಯವಸ್ಥೆ ಆಗುವ ಹಾಗೇ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದರು.