ಬೆಂಗಳೂರು:- ಶಾಲೆಗಳ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ವಿಚಾರಣೆ ಪೂರ್ಣವಾಗಿದ್ದು, ಕೆಲವೇ ದಿನಗಳಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಸರ್ಕಾರದ ಮೇಲ್ಮನವಿ ಸಂಬಂಧ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿತ್ತು. ಇದೀಗ ವಿಚಾರಣೆ ಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟಿಸುವ ಸಾಧ್ಯತೆಗಳಿವೆ.
ನ್ಯಾಯಾಂಗ ಹೋರಾಟದ ಗೊಂದಲದ ನಡುವೆಯೇ ಕೆಲವು ಪರೀಕ್ಷೆಗಳನ್ನು ರಾಜ್ಯ ಶಿಕ್ಷಣ ಇಲಾಖೆ ನಡೆಸಿದ್ದು, 4 ಪರೀಕ್ಷೆಗಳಷ್ಟೇ ಬಾಕಿ ಉಳಿದಿದ್ದವು. ಇದುವರೆಗೆ ಏನೇನಾಯಿತು 10 ಅಂಶಗಳ ವಿವರಣೆ ಇಲ್ಲಿದೆ.
* 1) 2023ರ ಅಕ್ಟೋಬರ್ 6 ಮತ್ತು 9: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಎರಡು ಸುತ್ತೋಲೆಗಳು ಪ್ರಕಟವಾಗಿದ್ದು, 5, 8, 9, 11ನೇ ತರಗತಿಗೆ ಬೋರ್ಡ್ ಎಕ್ಸಾಂ ನಡೆಸಲು ಸರ್ಕಾರ ನಿರ್ಧಾರವನ್ನು ಅಧಿಕೃತವಾಗಿ ಸೂಚಿಸಲಾಯಿತು.
2) ಸರ್ಕಾರದ ಸುತ್ತೋಲೆಗಳನ್ನು ವಿರೋಧಿಸಿ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ’ (ರುಪ್ಪಾ) ಹಾಗೂ “ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ’ (ಅವರ್ ಸ್ಕೂಲ್) ಕೋರ್ಟ್ನಲ್ಲಿ ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಕೆ ಮಾಡಿದವು. ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ನಡೆಸಿತು.
3) 2024 ಮಾರ್ಚ್ 6: ಬೋರ್ಡ್ ಪರೀಕ್ಷೆಗೆ ಸಂಬಂಧಿಸಿ ಸರ್ಕಾರ ಪ್ರಕಟಿಸಿದ ಎರಡೂ ಸುತ್ತೋಲೆಗಳನ್ನು ಹೈಕೋರ್ಟ್ನ ಏಕಸದಸ್ಯ ಪೀಠ ರದ್ದುಗೊಳಿಸಿತು. ಇದರಿಂದಾಗಿ, ಮಾ.11ರಿಂದ ನಡೆಯಬೇಕಿದ್ದ ಬೋರ್ಡ್ ಪರೀಕ್ಷೆ ರದ್ದುಗೊಂಡಿತು.
4) ಹೈಕೋರ್ಟ್ನ ಏಕಸದಸ್ಯ ಪೀಠ ಹೇಳಿದ್ದೇನು?
ಶಿಕ್ಷಣ ಕಾಯ್ದೆ ಪ್ರಕಾರ ಮೌಲ್ಯ ಮಾಪನ ನಿರ್ಧಾರ ಕೈಗೊಳ್ಳಲು ಸರ್ಕಾರ ಸ್ಪಷ್ಟ ನಿಯಮ ರೂಪಿಸಬೇಕು. ಯಾವುದೇ ನಿಯಮ ರೂಪಿಸುವ/ ಬದಲಾವಣೆ ಮಾಡುವಂತೆ ಆದೇಶಿಸುವ ಮುನ್ನ ಶಾಸನಸಭೆಯಲ್ಲಿ ಚರ್ಚೆಯಾಗಬೇಕು.
ನಿಯಮಗಳನ್ನು ರೂಪಿಸದೆ ಅಧಿಸೂಚನೆ ಹೊರಡಿಸಿ ಬೋರ್ಡ್ ಪರೀಕ್ಷೆ ನಿಗದಿಪಡಿಸಿದ್ದಲ್ಲದೆ, ಸುತ್ತೋಲೆ ಪ್ರಕಟಿಸಿ ಬಲವಂತ ಮಾಡಲಾಗಿದೆ. ಸುತ್ತೋಲೆ ಮೂಲಕ ಯಾವುದೇ ನಿಯಮ ಜಾರಿಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ಈ ಸುತ್ತೋಲೆಯು ರದ್ದುಪಡಿಸುವುದಕ್ಕೆ ಅರ್ಹವಾಗಿದೆ.
6) ಸುಪ್ರೀಂ ಕೋರ್ಟ್ಗೆ ಹೋರಾಟ: ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪು ಪ್ರಕಟವಾದ ಬೆನ್ನಿಗೆ, ಇದರ ವಿರುದ್ಧ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ’ (ರುಪ್ಪಾ) ಹಾಗೂ ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ’ (ಅವರ್ ಸ್ಕೂಲ್) ಸುಪ್ರೀಕೋರ್ಟ್ ಮೆಟ್ಟಿಲೇರಿದವು.
7) 2024ರ ಮಾರ್ಚ್ 12: ಕರ್ನಾಟಕ ಬೋರ್ಡ್ ಪರೀಕ್ಷೆ ಸಂಬಂಧ ಸಲ್ಲಿಕೆಯಾದ ಈ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಹಾಗೂ ಪಂಕಜ್ ಮಿತ್ತಲ್ ಅವರಿದ್ದ ನ್ಯಾಯಪೀಠವು ವಿಚಾರಣೆಗೆ ಎತ್ತಿಕೊಂಡಿತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶದ ವಿರುದ್ಧ ಮಾರ್ಚ್ 7ರಂದು ನೀಡಿದ್ದ ತೀರ್ಪನ್ನು ರದ್ದುಗೊಳಿಸಿತು. ಅಲ್ಲದೆ, ಇದರ ವಿಚಾರಣೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದಲ್ಲೇ ಮುಂದುವರಿಯಲಿದೆ ಎಂದು ಹೇಳಿತು.
8) 2024ರ ಮಾರ್ಚ್ 12: ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ತಾನು ನಡೆಸುತ್ತಿದ್ದ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಈ ಆದೇಶ ಹೊರಡಿಸಿದ್ದಾರೆ.