ಬೆಂಗಳೂರು: ನ್ಯೂಯಾರ್ಕ್ನ ಪೌರಾಣಿಕ ಕಾರ್ನೆಗೀ ಹಾಲ್ ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಡ್ಯಾನ್ಸ್ ಫೆಸ್ಟಿವಲ್ ನಲ್ಲಿ ಬೆಂಗಳೂರಿನ ರಶ್ಮಿ ಶಶಿ ಅವರ 30 ವಿಧ್ಯಾರ್ಥಿಗಳ ನೃತ್ಯ ಕಲಾರಸಿಕರ ಮನ ಸೆಳೆಯಿತು. ಡ್ಯಾನ್ಸ್ ಫೆಸ್ಟಿವಲ್ ನಲ್ಲಿ 10 ಆಯ್ದ ನೃತ್ಯ ಶಾಲೆಗಳು ಪಾಲ್ಗೊಂಡಿದ್ದು, ಬೆಂಗಳೂರು ಮೂಲದ ಗುರು ರಶ್ಮಿಯವರ ತಂಡ ಭಾರತೀಯ ಶಾಸ್ತ್ರೀಯ ನೃತ್ಯವನ್ನ ( Indian Classical Dance) ಪ್ರದರ್ಶಿಸಿತು.
ಟೆಕ್ಸಾಸ್ ಲ್ಯಾಂಡ್ನಲ್ಲಿರುವ ಸ್ಟುಡಿಯೋ ಮುದ್ರಾ ಸ್ಕೂಲ್ ಆಫ್ ಡ್ಯಾನ್ಸ್ನ ಕಲಾತ್ಮಕ ನಿರ್ದೇಶಕರಾಗಿರುವ ಗುರು ರಶ್ಮಿ ಶಶಿಯವರು ಬೆಂಗಳೂರಿನವರು. ಭರತನಾಟ್ಯ, ಜಾನಪದ ಮತ್ತು ಭಾರತದ ಇತರ ಸಮಕಾಲೀನ ನೃತ್ಯಗಳ ಕಲಾಕ್ಷೇತ್ರ ಶೈಲಿಯನ್ನು ಕಲಿಸುವಲ್ಲಿ ಗುರು ರಶ್ಮಿ ಪರಿಣತಿ ಹೊಂದಿದ್ದಾರೆ.
ಯುಎಸ್ಎ ಮತ್ತು ಭಾರತದಾದ್ಯಂತ ಹಲವಾರು ನೃತ್ಯ ಪ್ರದರ್ಶನಗಳನ್ನು ಪ್ರದರ್ಶಿಸಿದ್ದಾರೆ. ದಶಾವತಾರ, ರಾಮಾಯಣ, ಮಾಯಾ – ಸಮಕಾಲೀನ ನೃತ್ಯ ನಾಟಕ, ಪುಣ್ಯಕೋಟಿ, ರಘುವೀರ ಮತ್ತು ನಾರಿ ಪ್ರದರ್ಶನಗಳು ಗುರುತಿಸಲ್ಪಟ್ಟಿವೆ. ಪ್ರಮುಖ ಕಾರ್ಯಕ್ರಮಗಳಲ್ಲಿ ಅವರ ಅಭಿನಯಕ್ಕಾಗಿ ಹಲವು ಪ್ರಶಸ್ತಿಗಳು ಮತ್ತು ಪುರಸ್ಕಾರಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.