ಮಂಡ್ಯ :- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಮೇ.1 ರಂದು ಸೋಮವಾರ ಮದ್ದೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಪಿ.ಸ್ವಾಮಿ ಅವರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶಿವದಾಸ್ ಸತೀಶ್ ತಿಳಿಸಿದರು. ಮದ್ದೂರು ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೋಮವಾರ ಮಧ್ಯಾಹ್ನ ಮೈಸೂರಿನ ಕೃಷ್ಣರಾಜ ಮತ್ತು ಚಾಮರಾಜ ವಿಧಾನ ಸಭಾ ಕ್ಷೇತ್ರ, ಸಂಜೆ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಮುಗಿಸಿ ಬಳಿಕ 5.30 ಗಂಟೆ ಸುಮಾರಿಗೆ ಮದ್ದೂರಿಗೆ ಆಗಮಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಗಣ್ಯರಿಗೆ ಅದ್ದೂರಿ ಸ್ವಾಗತ ಕೋರಲು ಬಿಜೆಪಿ ತಾಲೂಕು ಘಟಕ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಪ್ರವಾಸಿ ಮಂದಿರದ ವೃತ್ತದಿಂದ ಹಳೇ ಎಂ.ಸಿ ರಸ್ತೆ ಮೂಲಕ ತೆರೆದ ವಾಹನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಗಣ್ಯರು ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಯಲಿದ್ದಾರೆ. ಇದೇ ವೇಳೆ ಸಂಜಯ ಟಾಕೀಸ್, ಕೆಮ್ಮಣ್ಣು ನಾಲೆ ವೃತ್ತ, ಕೊಲ್ಲಿ ವೃತ್ತಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಬಿಜೆಪಿ ಅಭ್ಯರ್ಥಿ ಎಸ್.ಪಿ.ಸ್ವಾಮಿ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗಣ್ಯರು ಮತಯಾಚನೆ ಮಾಡಲಿದ್ದು, ಹೀಗಾಗಿ ಕ್ಷೇತ್ರದ ಬಿಜೆಪಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ವರದಿ : ಗಿರೀಶ್ ರಾಜ್ ಮಂಡ್ಯ.