ಬೆಂಗಳೂರು: ವಿಧಾನಸಭಾ ಕಲಾಪ ಇಂದು ಕೊನೆಗೊಳ್ಳಲಿದ್ದು ಆ ನಂತರ ಇಂದು ಸಂಜೆ 6.30ಕ್ಕೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.
ಸಿಎಂ ಆಗಿ ಸಿದ್ದರಾಮಯ್ಯ(Siddaramaiah), ಡಿಸಿಎಂ ಆಗಿ ಡಿಕೆ ಶಿವಕುಮಾರ್(DK Shivakumar) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಐದು ವರ್ಷ ಪೂರ್ತಿ ಸಿದ್ದರಾಮಯ್ಯರೇ ಸಿಎಂ ಆಗಿರ್ತಾರಾ, ಅಥವಾ ಬದಲಾಗ್ತಾರಾ. ಡಿಸಿಎಂ ಆಗಿರೋ ಡಿಕೆಶಿ ಮುಂದೆ ಸಿಎಂ ಆಗ್ತಾರಾ. ಈ ರೀತಿ ಅನೇಕ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಲೇ ಇದ್ವು.
ಆದ್ರೆ, ಸಚಿವ ಎಂ.ಬಿ.ಪಾಟೀಲ್(MB Patil) ಸಿಡಿಸಿರುವ ಬಾಂಬ್, ಪ್ರಚಂಡ ಬಹುಮತ ಪಡೆದು ಅಧಿಕಾರಕ್ಕೆ ಏರಿರೋ ಕಾಂಗ್ರೆಸ್ ಮನೆಯಲ್ಲಿ ಕಂಪನ ಎಬ್ಬಿಸಿದೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ವರುಣ ಅಬ್ಬರಿಸಿದ್ದು ಸಾಲು ಸಾಲು ಅನಾಹುತಗಳು ಸಂಭವಿಸುತ್ತಿವೆ(Karnataka Rain). ಕಳೆದ ಮೂರ್ನಾಲ್ಕು ದಿನದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ಮರ-ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ. ಮಳೆ ನೀರು ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿಯಾಗುತ್ತಿದೆ. ಹೊಲ-ಗದ್ದೆ ಕೆರೆಯಂತಾಗಿದೆ