ಬೆಂಗಳೂರು:– ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಹಿನ್ನೆಲೆ ಪಕ್ಷದ ವರಿಷ್ಠರ ಕ್ರಮ ಪ್ರಶ್ನಿಸಿದ್ದ ಸಿಎಂ ಇಬ್ರಾಹಿಂ ದಾವೆ ವಜಾಗೊಂಡಿದೆ.
ಉಚ್ಛಾಟಿನೆ ಬಳಿಕ ಸಿಎಂ ಇಬ್ರಾಹಿಂ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿದ ವರಿಷ್ಠರ ಕ್ರಮ ಪ್ರಶ್ನಿಸಿ ಇಬ್ರಾಹಿಂ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಅವರನ್ನು ಪ್ರತಿವಾದಿಯಾಗಿಸಿದ್ದರು.
ಜೆಡಿಎಸ್ ವರಿಷ್ಠರು ಯಾವುದೇ ಮುನ್ಸೂಚನೆ ನೀಡದೇ ತಮ್ಮನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಸಿಟಿ ಸಿವಿಲ್ ಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ತಮ್ಮನ್ನು ಕಾನೂನು ಬಾಹಿರವಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ವಕೀಲ ಶತಬೀಷ್ ಹಾಗೂ ಶಿವಣ್ಣ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿ ಕೋರ್ಟ್ನಲ್ಲಿ ವಿಚಾರಣೆ ಮಾಡಲಾಗಿದೆ.
ನಮ್ಮದೇ ಒರಿಜಿನಲ್ ಜೆಡಿಎಸ್, ಬಿಜೆಪಿಗೆ ಬೆಂಬಲ ಇಲ್ಲ ಎಂದು ಸ್ವಪಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ ಸಿ.ಎಂ ಇಬ್ರಾಹಿಂ ಅವರನ್ನು ಅಕ್ಟೋಬರ್ 19ರಂದು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು.
ಅಲ್ಲದೇ ಕೆಲ ಜೆಡಿಎಸ್ ನಾಯಕರು ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಪಕ್ಷ ತೀರ್ಮಾನ ಕೈಗೊಂಡಿತ್ತು.