ಬೆಂಗಳೂರು: ಸಿಎಂ ಸೀಟ್ ಖಾಲಿ ಇಲ್ಲ, ಇನ್ನು 5 ವರ್ಷ ಸಿದ್ದರಾಮಯ್ಯನೇ ಸಿಎಂ ಆಗಿರ್ತಾರೆ. ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಆಪ್ತ ಸಚಿವ ಜಮೀರ್ ಅಹ್ಮದ್ ಖಾನ್. ಆಪರೇಷನ್ ಕಮಲ ಅಸಾಧ್ಯ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಗಲು ಕನಸು ಕಾಣ್ತಿದ್ದಾರೆ. 56 ಜನ ಎಂಎಲ್ಎಗಳನ್ನು ಕರೆದುಕೊಂಡು ಹೋಗಿ ಆಪರೇಷನ್ ಮಾಡೋದು ಸಾಧ್ಯನಾ?
ರಮೇಶ್ ಜಾರಕಿಹೊಳಿ ಅವರನ್ನೇ ಕೇಳಿ ಆಪರೇಷನ್ ಎಷ್ಟು ಕಷ್ಟ ಅಂತ. ಸಮ್ಮಿಶ್ರ ಸರ್ಕಾರದಲ್ಲಿ 17 ಜನರನ್ನು ಕರೆದುಕೊಂಡು ಹೋಗಲು ಎಷ್ಟು ಎಷ್ಟು ಸರ್ಕಸ್ ಮಾಡಿದ್ದಾರೆ. ರಮೇಶ್ ಹೈಕಮಾಂಡ್ ಬಳಿ ಬೇಳೆ ಬೇಯಿಸಿಕೊಳ್ಳಲು ಹಿಂಗೆ ಮಾತಾಡ್ತಿದ್ದಾರೆ. ರಮೇಶ್ ಬಿಜೆಪಿಲೀ ಇರೋ ಶಾಸಕರನ್ನು ಉಳಿಸಿಕೊಳ್ಳಲಿ. ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರಲು ಒಂದೇ ಕಾಲಿನಲ್ಲಿ ನಿಂತಿದ್ದಾರೆ ಎಂದರು.