ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಐಎಎಸ್, ಐಆರ್ಎಸ್ ಸೇರಿದಂತೆ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್ಸಿ/ಎಸ್ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ರಾಜ್ಯ ಪರಿಷತ್ತು ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಸದ್ಯ 10 ಸಾವಿರ ರೂಪಾಯಿ ಕೊಡಲಾಗುತ್ತಿದ್ದು, ಇದನ್ನು 5 ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು. ದೆಹಲಿಯಂತೆ ಹಾಸ್ಟೆಲ್ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಎಸ್ಸಿಎಸ್ಪಿ/ಟಿಎಸ್ಪಿ ಪರಿಷತ್ ಸಭೆಯ ಕೊನೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆಗಳು ಈ ಕೆಳಕಂಡಂತಿವೆ.
2024-25 ನೇ ಸಾಲಿಗೆ ಎಸ್ ಸಿಎಸ್ ಪಿ/ಟಿಎಸ್ ಪಿ ನಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು ಗೆ ಅನುಮೋದನೆ ನೀಡಲಾಗಿದೆ. ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 1,60,000 ಕೋಟಿ ರೂಪಾಯಿಯಲ್ಲಿ ಎಸ್ಸಿಎಸ್ಪಿ/ಟಿಎಸ್ಪಿಗೆ ಸುಮಾರು 39,121.46 ಕೋಟಿ ರೂ., ಎಸ್ಸಿಎಸ್ಪಿ/ಟಿಎಸ್ಪಿ ಅಡಿ 34 ಇಲಾಖೆಗಳಿಗೆ ಹಂಚಿಕೆ ಮಾಡಿರುವ ಹಣ ನಲ್ಲಿದೆ. ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ ಎಂದು ಅವರು ಹೇಳಿದರು.
ಕಳೆದ ವರ್ಷಕ್ಕಿಂತ ಈ ವರ್ಷ 3900 ಕೋಟಿ ರೂ. ಹೆಚ್ಚಾಗಿದೆ. 3,900 ಕೋಟಿ ರೂ. ಹೆಚ್ಚುವರಿ ಹಣ ಈ ವರ್ಷ ನೀಡಿದ್ದೇವೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು, ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ದೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಶೇ. 100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಕಾಯ್ದೆಯಲ್ಲಿದ್ದ 7D ರದ್ದು
ಮಾಡಿದ ರೀತಿಯಲ್ಲೇ 7C ಕೂಡ ರದ್ದು ಮಾಡಬೇಕು ಎನ್ನುವ ಶಾಸಕ ನರೇಂದ್ರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಬಾದಕಗಳನ್ನು ಪರಿಶೀಲಿಸಲಾಗುವುದು ಎಂದರು.
ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು. ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಸೀಟು, ಉಳಿದ ಶೇ. 25 ರಷ್ಟು ಸೀಟುಗಳನ್ನು ಇತರ ಪ್ರದೇಶದ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು. ಸರ್ಕಾರಿ ಶಾಲೆಗಿಂತ ಕ್ರೈಸ್ನಲ್ಲಿ ಓದಿರುವ ಬಡ ವಿದ್ಯಾರ್ಥಿನಿ ಕ್ರೈಸ್ ಶಾಲೆಯಲ್ಲಿ ಓದಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಇದನ್ನು ಪ್ರೋತ್ಸಾಹಿಸುತ್ತಲೇ ಇತರ ನ್ಯೂನತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು. ಬಜೆಟ್ನಲ್ಲಿ ನಾವು ಘೋಷಿಸಿರುವ ಎಲ್ಲ ಕಾರ್ಯಕ್ರಮಗಳನ್ನೂ ನೀವು ಜಾರಿ