ಡೆಂಘೀ ಪ್ರಕರಣಗಳ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ರಾಜ್ಯದಲ್ಲಿ ನಿನ್ನೆವರೆಗೂ ಒಟ್ಟು 5,374 ಪ್ರಕರಣ ವರದಿಯಾಗಿವೆ. ಡೆಂಘೀಯಿಂದ ಐವರು ಸಾವನ್ನಪ್ಪಿದ್ದಾರೆ.
ಟೆಸ್ಟಿಂಗ್ ಪ್ರಮಾಣ ಹೆಚ್ಚಾಗಿರುವುದರಿಂದ ಪ್ರಕರಣಗಳು ಹೆಚ್ಚೆಚ್ಚು ಪತ್ತೆಯಾಗುತ್ತಿವೆ. ರಾಜ್ಯದಲ್ಲಿ ಡೆಂಘೀಯಿಂದ ಸಾವಿನ ಪ್ರಮಾಣ ಇನ್ನೂ ಕಡಿಮೆ ಇದೆ.
ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವರ್ ಅವರು ಸಭೆಗೆ ಮಾಹಿತಿ ನೀಡಿದ್ದಾರೆ.ಇನ್ನು ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘೀ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೇ ಡೆಂಘಿ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದೂ ಸಿಎಂ ಸಭೆಯಲ್ಲಿ ಅಧಿಕಾರಿಗಳಿಗೆ ಒತ್ತಿ ಹೇಳಿದ್ದಾರೆ ..