ಚಿಕ್ಕಮಗಳೂರು : ಸಿಎಂ ಸಿದ್ದರಾಮಯ್ಯ ತಾವು ಸುಳ್ಳರಾಮಯ್ಯ ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಸಿ.ಟಿ.ರವಿ(CT Ravi) ವಾಗ್ದಾಳಿ ನಡೆಸಿದರು. ಬಡವರಿಗೆ ಉಚಿತ ಅಕ್ಕಿ ಕೊಡುವ ಸಂಬಂಧ ಕೇಂದ್ರದ ಮೇಲೆ ಕಾಂಗ್ರೆಸ್ ಆರೋಪಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಟಿ ರವಿ ಅವರು, ಸಿಎಂ ಸಿದ್ದರಾಮಯ್ಯ ‘ಸುಳ್ಳುರಾಮಯ್ಯ’ ಅಲ್ಲಾ ಅನ್ನೋದಾದರೆ ಕಮಿಟ್ಮೆಂಟ್ ಲೆಟರ್ ತೋರಿಸಲಿ. ಅಕ್ಕಿ ಕಳಿಸುತ್ತೇವೆ ನಿಮ್ಮ ಹೆಸರು ಹಾಕ್ಕೊಂಡು ಕೊಡಿ ಅಂತ ಲೆಟರ್ ಕಳಿಸಿಲ್ಲ. ಕಳಿಸಿದ್ದರೆ ಎಲ್ಲಿದೆ ಆ ಕಮಿಟ್ಮೆಂಟ್ ಲೆಟರ್ ತೋರಿಸಲಿ ಎಂದು ಸವಾಲು ಹಾಕಿದರು.
ಎಫ್.ಸಿ.ಐ. ನಿಮಗೆ ಅಗತ್ಯವಿರುವ ಅಕ್ಕಿ ಕಳಿಸುತ್ತೇವೆ ಎಂದು ಹೇಳಿದ್ದಾರಾ, ಲೆಟರ್ ತೋರಿಸಿ. ಅಧಿಕಾರಕ್ಕೆ ಬರಲು ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ದಾರೆ. ಆದರೆ ಬೇಕಾಗುವಷ್ಟು ಅಕ್ಕಿ ಸಂಗ್ರಹ ಇಲ್ಲ. ಇದೊಂದೇ ಯೋಜನೆ ಅಲ್ಲ. ಕಾಂಗ್ರೆಸ್ ಗ್ಯಾರಂಟಿಯ ಐದು ಯೋಜನೆಗಳೂ ಹೀಗೆ ಸುಳ್ಳು ಹೇಳಿ ಜನರನ್ನು ವಂಚಿಸಲಾಗಿದೆ. ಅನ್ನಭಾಗ್ಯಕ್ಕೆ ಸಾಕಾಗುವಷ್ಟು ಅಕ್ಕಿ ಇಲ್ಲದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ.ತನ್ನ ಕೈನಲ್ಲಿ ಆಗದಿರುವುದಕ್ಕೆ ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಈಗಲೇ ಶುರು ಮಾಡಿದ್ದಾರೆ. ನಾಲ್ಕೈದು ತಿಂಗಳ ಬಳಿಕ ಎಂದು ಭಾವಿಸಿದ್ದೆ ಆರೋಪ ಮಾಡುವುದನ್ನು ಈಗಲೇ ಶುರು ಮಾಡಿದ್ದಾರೆ. ಜುಲೈ 1ರಿಂದ ಅಕ್ಕಿ ಉಚಿತ ಎಂದು ಭಾಷಣ, ಈಗ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.