ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೀದರ್ ಪ್ರವಾಸ ಕೈಗೊಂಡಿದ್ದು, ಶತಾಯುಷಿ ಡಾ. ಭೀಮಣ್ಣ ಖಂಡ್ರೆಯವರ ಶತಮಾನೋತ್ಸವ ಹಾಗೂ ಲೋಕನಾಯಕ ಭೀಮಣ್ಣ ಖಂಡ್ರೆ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಇಂದು ಭಾಲ್ಕಿ ಸಾಕ್ಷಿಯಾಗಲಿದೆ. ಈ ಅಭಿನಂದನಾ ಗ್ರಂಥವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದು,
ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾಲ್ಕಿ ಬಿಕೆಐಟಿ ಕಾಲೇಜು ಆವರಣದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಾಗಿದೆ. ಮಠಾಧೀಶರು, ಜನಪ್ರತಿನಿಧಿಗಳು, ಗಣ್ಯರಿಗೆ ಬೃಹತ್ ವೇದಿಕೆ ಮೇಲೆ 300 ಆಸನದ ವ್ಯವಸ್ಥೆ ಮಾಡಿದ್ದು, ಜನರಿಗಾಗಿ ಒಂದು ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ವೀರಪ್ಪ ಮೊಯ್ಲಿ, ಸಚಿವ ಸಂಪುಟದ ಸಚಿವರು, ಸುತ್ತೂರು ಶ್ರೀ, ಸಿದ್ದಗಂಗಾ ಶ್ರೀಗಳು, ಸಿರಿಗೆರಿ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.