ಬೆಂಗಳೂರು: ಫಿಲ್ಮ್ ಚೇಂಬರ್ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ.ಹರೀಶ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದೆ.
ಮುಖ್ಯಮಂತ್ರಿಗಳನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ್ದೇವೆ ಎಂದು ಸಿಎಂ ಭೇಟಿ ಬಳಿಕ ಫಿಲ್ಮ್ ಚೇಂಬರ್ ಅಧ್ಯಕ್ಷ ಹರೀಶ್ ತಿಳಿಸಿದ್ದಾರೆ. ವಾಣಿಜ್ಯ ಮಂಡಳಿಯಿಂದ ಸಮಸ್ಯೆಗಳ ಬಗ್ಗೆ ಮನವಿ ಕೊಟ್ಟಿದ್ದೇವೆ.
ಚಿತ್ರರಂಗದ ಧ್ಯೇಯೋದ್ದೇಶದ ಬಗ್ಗೆಯೂ ಸಿಎಂ ಮುಂದೆ ಪ್ರಸ್ತಾಪ ಮಾಡಿದ್ದೇವೆ. ಸಬ್ಸಿಡಿ ವಿಚಾರ ಸದ್ಯಕ್ಕೆ ಚರ್ಚೆ ಮಾಡಿಲ್ಲ ಎಂದು ಭಾ.ಮಾ.ಹರೀಶ್ ತಿಳಿಸಿದ್ದಾರೆ. ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಆಯ್ಕೆ ಸಂಬಂಧ ಚರ್ಚಿಸಿದ್ದೇವೆ. ಕಂಠೀರವ ಸ್ಟುಡಿಯೋ ಅಧ್ಯಕ್ಷರ ಆಯ್ಕೆ ಬಗ್ಗೆಯೂ ಸಮಾಲೋಚನೆ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.