ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ಸೇನಾ ವಾಹನವೊಂದು ದಾರಿ ತಪ್ಪಿ ಕಂದಕಕ್ಕೆ ಬಿದ್ದಿದ್ದು, ಕರ್ನಾಟದ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಇನ್ನೂ ಹುತಾತ್ಮರಾದ ಯೋಧರ ಪಾರ್ಥಿವ ಶರೀರಕ್ಕೆ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದ್ದಾರೆ.
ಬೆಳಗಾವಿ ಪಂತ ಬಾಳೇಕುಂದ್ರಿ ದಯಾನಂದ ತಿರಕನ್ನವರ್, ಮುಧೋಳದ ಮಹಾಲಿಂಗಪುರದ ಮಹೇಶ್ ಮರಿಗೊಂಡ, ಕುಂದಾಪುರ ಬೀಜಾಡಿಯ ಅನುಪ್ ಮೃತ ಸೈನಿಕರಾಗಿದ್ದಾರೆ.
ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.