ಮಂಡ್ಯ :- ದಕ್ಷಿಣ ಕರ್ನಾಟಕದ ಜೀವನದಿ ಕಾವೇರಿ ಮಾತೆ ಹಾಗೂ ಕೃಷ್ಣ ರಾಜ ಸಾಗರ ಅಣೆಕಟ್ಟು (KRS) ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳು ಭಾಗಿನ ಅರ್ಪಿಸಿದರು.
ಎರಡು ವರ್ಷಗಳ ಬಳಿಕ ಕೃಷ್ಣ ರಾಜ ಸಾಗರ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದ್ದು, ಸೋಮವಾರ ಮಧ್ಯಾಹ್ನ 12 ಗಂಟೆಗೆ ಕೆ.ಆರ್.ಎಸ್ ಅಣೆಕಟ್ಟೆಗೆ ಆಗಮಿಸಿದ ಗಣ್ಯರು ಪೂಜಾ ಕೈಂಕರ್ಯಗಳನ್ನು ನಡೆಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗೀನ ಸಮರ್ಪಣೆ ಮಾಡಿದರು.