ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹರಿದಾಟ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ರಾಜ್ಯ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲಿ ಪೆನ್ಡ್ರೈನ್ ಪ್ರಕರಣ ಸದ್ದು ಮಾಡ್ತಿದೆ. ರಾಜ್ಯದಲ್ಲಿ ಜೆಡಿಎಸ್ ನಾಯಕರಿಗೆ ಮುಜುಗರವನ್ನು ಉಂಟು ಮಾಡಿದೆ.
ಮತ್ತೊಂದೆಡೆ ಹಾಸನ ವಿಡಿಯೋ ಪ್ರಕರಣದಲ್ಲಿ ಎಸ್ಐಟಿ ತನಿಖೆ ಚುರುಕುಗೊಂಡಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೇ ನಡೆಸಲಾಗಿದ್ದು, ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್
ಗೃಹ ಸಚಿವ ಜಿ.ಪರಮೇಶ್ವರ್ ಭಾಗಿಯಾಗಿದ್ದರು. ನಂತರ ಸಭೆಯಿಂದ ಚುನಾವಣಾ ಪ್ರಚಾರಕ್ಕೆ ಸಿಎಂ ಸಿದ್ದರಾಮಯ್ಯ ತೆರಳಿದರು. ಸಿಎಂ ತೆರಳಿದ ಬಳಿಕವೂ ಕಾವೇರಿ ನಿವಾಸದಲ್ಲಿ ಎಸ್ ಐ ಟಿ ಮುಖಸ್ಥರ ಜೊತೆ ಪರಮೇಶ್ವರ್, ಡಿ ಕೆ ಶಿವಕುಮಾರ್ ಚರ್ಚೆ ನಡೆಸಿದರು.