ಬೆಂಗಳೂರು: ಸಿಎಂ ಸಿದ್ದರಾಮಯ್ಯ 3 ಗಂಟೆ 14 ನಿಮಿಷ ಸುದೀರ್ಘ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಗಾತ್ರ ಒಟ್ಟು 3,71,383 ಕೋಟಿ ರೂಪಾಯಿ ಆಗಿದೆ. ಬಜೆಟ್ ಭಾಷಣ ಮುಕ್ತಾಯವಾದ ಕಾರಣ ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 10.15ಕ್ಕೆ ಕಲಾಪ ಆರಂಭವಾಗಲಿದೆ.
2024-25ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದೀರ್ಘ 3 ಗಂಟೆ 15 ನಿಮಿಷ ಕಾಲ ಮಂಡಿಸಿದರು. ಬಜೆಟ್ ಭಾಷಣ ಮುಕ್ತಾಯ ಹಿನ್ನೆಲೆಯಲ್ಲಿ ಸದನವನ್ನು ಸಭಾಪತಿಗಳು ಸೋಮವಾರಕ್ಕೆ ಮುಂದೂಡಿದರು.
ಕಳೆದ ಬಾರಿ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಈ ಬಾರಿ 3.50 ಲಕ್ಷ ಕೋಟಿ ಅಥವಾ 3.80 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ. ಕಳೆದ ಬಜೆಟ್ನಲ್ಲಿ 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು ಸರ್ಕಾರ. ಈ ಬಾರಿ ಅಂದಾಜು 1 ಲಕ್ಷ ಕೋಟಿಗೆ ಸಾಲ ಹೆಚ್ಚಾಗುವ ಸಾಧ್ಯತೆ ಇದೆ.