ಹುಬ್ಬಳ್ಳಿ: ನ್ಯಾಯಾಲಯ ನೀಡಿರುವ ತೀರ್ಪಿನ ಆದಾರದ ಮೇಲೆ ಸಿಎಂ ಸಿದ್ಧರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಒತ್ತಾಯಿಸಿದ್ದಾರೆ.ಮೂಡಾ ಹಗರಣದ ಬಗ್ಗೆ ಬಿಜೆಪಿ ನಿರಂತರವಾಗಿ ಹೋರಾಟ ಮಾಡಿತ್ತು. ಈ ಮೂಲಕ ಪಕ್ಷಕ್ಕೂ ದೊಡ್ಡ ಜಯ ಸಿಕ್ಕಿದೆ.
ಕಾನೂನು ಎಲ್ಲರಿಗೂ ಒಂದೇ ಎಂಬುದನ್ನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕು ಎಂದರು. ಸಿಎಂ ಸಿದ್ಧರಾಮಯ್ಯನವರು ರಾಜೀನಾಮೆ ನೀಡಿ, ತನಿಖೆಯ ನಂತರ ಅವರ ತಪ್ಪು ಇಲ್ಲದೇ ಹೋದರೇ ಮತ್ತೆ ಬೇಕಿದ್ದರೇ ಸಿಎಂ ಆಗಲಿ ಎಂದರು.