ಉತ್ತರ ಕನ್ನಡ:- ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದ್ದು, ಭಾರೀ ಮಳೆಯಿಂದ ಭರ್ತಿಯಾಗಿದೆ. ಈ ಜಲಾಶಯ 9 ಜಿಲ್ಲೆಗಳಿಗೆ ನೀರು ಒದಗಿಸುತ್ತದೆ. ಈ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ನಿರ್ಮಾಣ ಮಾಡಲಾಗಿದೆ.
519.60 ಮೀಟರ್ ಎತ್ತರದಲ್ಲಿ 123.08 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ ಇಂದು ಬೆಳಗ್ಗೆ 123.08 ಟಿಎಂಸಿ ನೀರು ಸಂಗ್ರಹವಾಗಿದೆ. ಒಳ ಹರಿವು: 19968 ಕ್ಯೂಸೆಕ್, ಹೊರ ಹರಿವು: 19968 ಕ್ಯೂಸೆಕ್ ಇದೆ.
ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಇಂದು ಆಲಮಟ್ಟಿಯಲ್ಲಿ ಕೃಷ್ಣಾ ನದಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸಿಎಂ ಕೊಪ್ಪಳ ಜಿಲ್ಲೆಯಿಂದ ಆಲಮಟ್ಟಿಗೆ ಆಗಮಿಸಿ ಬಾಗೀನ ಅರ್ಪಣೆ ಮಾಡಲಿದ್ದಾರೆ. ಬಾಗಿನ ಅರ್ಪಣೆ ಹಿನ್ನೆಲೆ ಜಲಾಶಯಕ್ಕೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಹಾಲಿನ ನೊರೆಯಂತೆ ಧುಮ್ಮಿಕ್ಕುವ ನೀರಿಗೆ ಕಲರ್ ಕಲರ್ ವಿದ್ಯುತ್ ದೀಪಗಳ ಅಲಂಕಾರ ಕಣ್ಮನ ಸೆಳೆಯುತ್ತಿದೆ.