ಬೆಂಗಳೂರು: ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದ ಬಳಿ ಅಕ್ಕೈ ಪದ್ಮಶಾಲಿ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಲೈಂಗಿಕ ಅಲ್ಪ ಸಂಖ್ಯಾತರು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.
ವಿಧಾನ ಪರಿಷತ್, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಲೈಂಗಿಕ ಅಲ್ಪ ಸಂಖ್ಯಾತರಿಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಲೈಂಗಿಕ ಅಲ್ಪ ಸಂಖ್ಯಾತರ ಮೇಲಿನ ದೌರ್ಜನ್ಯ ತಡೆಯುವಂತೆ ಮನವಿ ಮಾಡಿದ್ದಾರೆ.