ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಗಳಿಸಿ, ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ
ಸಿಎಂ ಸಿದ್ದರಾಮಯ್ಯನವರು 12 ಗಂಟೆಗೆ 14ನೇ ಬಾರಿ ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಬಜೆಟ್ನಲ್ಲಿ ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ಹೆಚ್ಚು ಅನುದಾನ ಸಿಗುತ್ತಾ? ಎಂಬ ಪ್ರಶ್ನೆ ಮೂಡಿದೆ. ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ನಗರದ ಸಮಗ್ರ ಅಭಿವೃದ್ಧಿಯ ಗುರಿ ಹೊಂದಿದ್ದು, ಟ್ರಾಫಿಕ್ ಸಮಸ್ಯೆ, ಕಸದ ವಿಲೇವಾರಿ ಸಮಸ್ಯೆ, ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಆಗುವ ಅವಾಂತರಗಳು, ಬೃಹತ್ ನೀರುಗಾಲುವೆ ಸಮಸ್ಯೆಗಳು, ಎಲಿವೇಟಡ್ ಕಾರಿಡಾರ್, ಟೆಕ್ಪಾರ್ಕ್, ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ ಕನಸು, ರಾಜಕಾಲುವೆ ಅಭಿವೃದ್ಧಿ ಸೇರಿದಂತೆ ಅನೇಕ ನಿರೀಕ್ಷೆಗಳಿವೆ.
ಸಿಎಂ ಸಿದ್ದರಾಮಯ್ಯ 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಜಾರಿ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಜೆಟ್ ಇದಾಗಿದೆ. ಹಿಂದಿನ ಸರ್ಕಾರ 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿತ್ತು. ಈ ಬಾರಿ ಸಿದ್ದರಾಮಯ್ಯ ಮಂಡಿಸುವ ಬಜೆಟ್ ಗಾತ್ರ ಮತ್ತಷ್ಟು ಹೆಚ್ಚಾಗಲಿದೆ. ಈ ಮೂಲಕ ಗ್ಯಾರಂಟಿ ಜಾರಿ ಜೊತೆ ಇನ್ನೇಷ್ಟು ಭಾಗ್ಯ ಸಿಗಲಿದೆ ಕಾದು ನೋಡಬೇಕು.