ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ನಿರ್ಣಾಯಕವಾಗಿರುವ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಯು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ವನ್ಯಜೀವಿ ಅನುಮೋದನೆಗಾಗಿ ದೀರ್ಘಕಾಲದಿಂದ ಬಾಕಿ ಉಳಿದಿದೆ. ಮಹದಾಯಿ ವಾಟರ್ ಡಿಸ್ಪ್ಯೂಟ್ ಟ್ರಿಬ್ಯೂನಲ್ ಅವಾರ್ಡ್ ಅನ್ನು 14-08-2018 ರಂದು ಘೋಷಿಸಲಾಯಿತು ಮತ್ತು 27-02-2020 ರಂದು ಭಾರತದ ಗೆಜೆಟ್ನಲ್ಲಿ ಪ್ರಕಟಿಸಲಾಯಿತು.
ಕರ್ನಾಟಕ ರಾಜ್ಯಕ್ಕೆ ಒಟ್ಟು 13.42 ಟಿಎಂಸಿ ಹಂಚಿಕೆಯಾಗಿದೆ. ಅದರಲ್ಲಿ 3.9 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ತಿರುಗಿಸಲು ರಾಜ್ಯ ಸರ್ಕಾರವು 16-06-2022 ರಂದು CWC ಗೆ ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ ಮಾರ್ಪಡಿಸಿದ ಪೂರ್ವ-ಕಾರ್ಯಸಾಧ್ಯತಾ ವರದಿಯನ್ನು ಅನುಮೋದನೆಗಾಗಿ ಸಲ್ಲಿಸಿದೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ