ಬೆಂಗಳೂರು ;- ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕೆಂದು ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.
ಶನಿವಾರ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣ ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರನ್ನು ಪತ್ರದಲ್ಲಿ ಕೋರಿದ್ದಾರೆ.