ಬೆಂಗಳೂರು: ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ನೀಡಿದ್ದು ಅಲ್ಲಿನ ಮಕ್ಕಳ ವಿದ್ಯಾಭ್ಯಾಸ ಕುರಿತು ಮಕ್ಕಳಲ್ಲಿ ಚರ್ಚ ನಡೆಸಿದರು.
ಹಾಗೆ ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದ ಸಿಎಂ ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿತ್ತು ಎಂದ ವಿದ್ಯಾರ್ಥಿಗಳು.
ಆಗಾಗ ಪಲಾವ್ ಕೊಡ್ತಾರೆ ಎಂದು ಖುಷಿಪಟ್ಟ ವಿದ್ಯಾರ್ಥಿಗಳು
ಆ ನಂತರ ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ ಸಂದಿ ಎಂದರೇನು? ಸಂದಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.
ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ. ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. ಬಳಿಕ 94-95 ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. ಮಕ್ಕಳು ಚಪ್ಪಾಳೆ ತಟ್ಟಿದರು. ಹೀಗೆ ಮಕ್ಕಳ ಜೊತೆ ಕಾಲಹರಟೆ ಮಾಡಿ ಅಲ್ಲಿನ ಸ್ಥಿತಿ ಗತಿ ಬಗ್ಗೆ ತಿಳಿದುಕೊಂಡರು ಹಾಗೆ ಮಕ್ಕಳ ಜೊತೆನೆ ಕುಳಿದು ಮಧ್ಯಾಹ್ನದ ಉಪಹಾರ ಕೂಡ ಸೇವಿಸಿದರು.