ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಬರ ಪರಿಸ್ಥಿತಿ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಹತ್ವದ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.