ಬೆಂಗಳೂರು:– ರಾಜ್ಯದ ಉತ್ತರ ಒಳನಾಡಿನಲ್ಲಿ ಚಳಿ ಮುಂದುವರಿಯಲಿದ್ದು, ಉಳಿದೆಡೆ ಒಣಹವೆ ಇರಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 13.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.
ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಎಚ್ಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.