ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಒಕ್ಕಲಿಗ ಸಚಿವರ ನಡುವೆ ಶೀತಲ ಸಮರ ನಡೆಯುತ್ತಿರುವ ವಿಚಾರ ಮೂಲಗಳಿಂದ ತಿಳಿದುಬಂದಿದೆ.
ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. ಇದರ ಭಾಗವಾಗಿ ಮೂವರು ಸಚಿವರಿಗೆ ಡಿಕೆ ಶಿವಕುಮಾರ್ (DK Shivakumar) ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ.
ಕೃಷಿ ಸಚಿವ ಚಲುವರಾಯಸ್ವಾಮಿಗೆ ಮಂಡ್ಯ, ಕಂದಾಯ ಖಾತೆಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಬೆಂಗಳೂರು ಉತ್ತರ, ಪಶುಸಂಗೋಪನೆ ಸಚಿವ ವೆಂಕಟೇಶ್ ಬಳಿ ಮೈಸೂರಿನಿಂದ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರಿದ ವಿಚಾರ ಮೂಲಗಳಿಂದ ತಿಳಿದುಬಂದಿದೆ.
ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಪ್ರಭಾವಿ ಸಚಿವರು ಸ್ಪರ್ಧಿಸಿ ಗೆದ್ದರೆ ಒಕ್ಕಲಿಗರ ಬೆಂಬಲದ ಕ್ರೆಡಿಟ್ ಸಿಗಲಿದೆ ಎಂಬ ಲೆಕ್ಕಾಚಾರವನ್ನು ಡಿಕೆಶಿ ಹಾಕಿದ್ದಾರೆ