ಬೆಂಗಳೂರು: ಒಕ್ಕೂಟದ ಉದ್ದೇಶ ಹಾಗೂ ಗುರಿಗೆ ಸಂಬಂಧಿಸಿ 26 ರಾಷ್ಟ್ರೀಯ ವಿಪಕ್ಷಗಳು ಸಾಮೂಹಿಕ ಸಂಕಲ್ಪ ಮಾಡಿಕೊಂಡಿದ್ದು, ದ್ವೇಷ ರಾಜಕಾರಣದ ವಿರುದ್ಧ ಸಾಮೂಹಿಕ ಹೋರಾಟಕ್ಕೆ ನಿರ್ಧಾರ ಮಾಡಿವೆ.
ಸಾರ್ವಜನಿಕ ಉದ್ದಿಮೆಗಳ ಸಂರಕ್ಷಣೆಗೆ ನಿರ್ಣಯ ಕೈಗೊಂಡಿದ್ದು, ಮಣಿಪುರದ ಗಲಭೆ ವಿಚಾರ ಕೂಡ ಸಾಮೂಹಿಕ ಸಂಕಲ್ಪದ ವೇಳೆ ಪ್ರಸ್ತಾಪವಾಗಿದೆ. ಲೋಕಸಭೆಗೆ ಒಟ್ಟಾಗಿ ಸ್ಪರ್ಧೆ ಮಾಡುವ ನಿರ್ಣಯ ಕೈಗೊಂಡಿದ್ದು, ಸೀಟು ಹಂಚಿಕೆಗೆ ಸಂಬಂಧಿಸಿ ರಾಜ್ಯವಾರು ಸಮಿತಿಗಳ ರಚನೆಗೆ ಚರ್ಚೆ ನಡೆಸಲಾಗಿದೆ.
ಯಾವ ಯಾವ ರಾಜ್ಯ ಗಳಲ್ಲಿ ಎಷ್ಟೆಷ್ಟು ಸೀಟು ಹಂಚಿಕೆ ಎಂಬ ನಿರ್ಧಾರ ಮಾಡಲು ಪ್ರತ್ಯೇಕ ಸಮಿತಿ ಮಾಡಲು ತೀರ್ಮಾನ ಮಾಡಲಾಗಿದೆ.
ರಾಜ್ಯವಾರು ಸಮಿತಿ ಮಾಡಿ ಮುಂದಿನ ದಿನಗಳಲ್ಲಿ ಸೀಟು ಹಂಚಿಕೆ ಸಂಬಂಧ ಚರ್ಚೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಸಾಮೂಹಿಕ ಸಂಕಲ್ಪಕ್ಕೆ ಸಮ್ಮತಿ ಸೂಚಿಸಿ 26 ಪಕ್ಷಗಳ ನಾಯಕರು ಸಹಿ ಹಾಕಿದ್ದಾರೆ.