ಪೋರ್ಟ್ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ (Andaman And Nicobar) ದ್ವೀಪಗಳ ಪೋರ್ಟ್ ಬ್ಲೇರ್ ಬಳಿ 5.9 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ (National Center For Seismology) ತಿಳಿಸಿದೆ.
ರಾಜಧಾನಿ ಪೋರ್ಟ್ ಬ್ಲೇರ್ನ (Port Blair) ಆಗ್ನೇಯಕ್ಕೆ 126 ಕಿಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಕಂಡುಬಂದಿದ್ದು, ರಿಕ್ಟರ್ ಮಾಪಕದಲ್ಲಿ 5.9 ಭೂಕಂಪನದ ತೀವ್ರತೆ ಕಂಡುಬಂದಿದೆ. ಭೂಕಂಪನವು ಮಧ್ಯರಾತ್ರಿ 12:53ಕ್ಕೆ ಐಎಸ್ಟಿ ಮೇಲ್ಮೈಯಿಂದ 69 ಕಿಮೀ ಆಳದಲ್ಲಿ, 10.75 ಅಕ್ಷಾಂಶ ಮತ್ತು 93.47 ರೇಖಾಂಶದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.