ಬೆಂಗಳೂರು: ನಿಮ್ಮ ವ್ಯಾಪ್ತಿಯ ಒಂದು ಠಾಣೆಗೆ ದಿಢೀರ್ ಭೇಟಿ ನೀಡಬೇಕು ಎಂದು ಹಿರಿಯ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (Alok Mohan) ಸೂಚನೆ ನೀಡಿದ್ದಾರೆ. ಆ ಮೂಲಕ ಪೊಲೀಸರ ಕಾರ್ಯವೈಖರಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ.
ಭದ್ರತೆಗೆ ನಿಯೋಜನೆಯಾಗಿದ್ದರೆ ಅಧಿಕಾರಿಗಳ ಸಂಪರ್ಕದಲ್ಲಿ ಇರಬೇಕು ಎಂದು ಹೇಳಿದ್ದಾರೆ.ಹೆಡ್ ಕಾನ್ಸ್ಟೇಬಲ್, ಕಾನ್ಸ್ಟೇಬಲ್ಗಳ ಜೊತೆಗೂ ಸಂವಹನ ನಡೆಸಿ. ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರ ಜೊತೆ ಚರ್ಚೆ ನಡೆಸಬೇಕು. ಕಮಿಷನರ್, ಎಸ್ಪಿ ವಾರದಲ್ಲಿ ಒಂದು ದಿನ ನೈಟ್ ರೌಂಡ್ಸ್ ಮಾಡಬೇಕು. ನೈಟ್ ಬೀಟ್ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಲು ದಿಢೀರ್ ಭೇಟಿ ನೀಡಿ ಎಂದು ತಿಳಿಸಿದ್ದಾರೆ.