ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಲವ್ ಜಿಹಾದ್ ಮತ್ತು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆಲ್ಲ ಇವರು ಅವಕಾಶ ಕೊಟ್ಟಿದ್ದಾರೆ ಎಂದು ಆರೋಪಿಸಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ನಿಷೇಧಕ್ಕೆ ಒಳಗಾದ ಪಿಎಫ್ಐ ಸಂಘಟನೆಯ ಚಟುವಟಿಕೆ ಜಾಸ್ತಿಯಾಗುತ್ತಿದೆ. ಇವರೆಲ್ಲ ಟಿಪ್ಪು ಸಿದ್ಧಾಂತ ಇಟ್ಕೊಂಡು ಬಂದಿರೋರು.ಈ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು
ಜುಲೈ 18 ರಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ಅವರೆಲ್ಲ ಇಲ್ಲಿಗೆ ಆಗಮಿಸುತ್ತಿರುವುದು ಈ ಸರ್ಕಾರವನ್ನು ಎಟಿಎಂ ಮಾಡಿಕೊಳ್ಳಲು. ವರ್ಗಾವಣೆ ದಂಧೆ ಮಾಡೋದಿಕ್ಕೂ ಅವರು ಇಲ್ಲಿಗೆ ಬರುತ್ತಿದ್ದಾರೆ ಎಂದು ಆರೋಪಿಸಿದರು