ಬೆಂಗಳೂರು : ಹಾಲಿನ ದರ ಹೆಚ್ಚಳದಿಂದ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದ್ದು, ಇಂದು ಸಂಜೆ 5.30 ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಸಭೆಯಲ್ಲಿ ಕೆಎಂಎಫ್ ಅಧಿಕಾರಿಗಳು ಹಾಲಿನದರ ಹೆಚ್ಚಳದ ಪ್ರಸ್ತಾವನೆಯನ್ನು ಸಿಎಂ ಸಿದ್ದರಾಮಯ್ಯ ಮುಂದಿಡಲಿದೆ.
ಗುರುವಾರ ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ವೆಂಕಟೇಶ್ ಅವರು, ಹಾಲಿನ ದರ ಏರಿಸುವಂತೆ ಸಾಕಷ್ಟು ಒತ್ತಾಯ ಬರುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ. ಹಾಗೆ ಹಾಲಿನ ದರ ಏರಿಸುವಂತೆ ರೈತರು, ಒಕ್ಕೂಟದಿಂದ ಒತ್ತಾಯವಿದೆ. ಹಾಲಿನ ದರ 5 ರೂ.ಗೆ ಹೆಚ್ಚಿಸುವಂತೆ ರೈತರ ಬೇಡಿಕೆ ಇದೆ. ಈ ಸಂಬಂಧ ಸಿಎಂ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.
ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುವ ಸಾಧ್ಯತೆ ಇದ್ದು ಸಭೆಯ ಬಳಿಕ ಹಾಲಿನ ದರ ಏರಿಕೆಯ ಬಗ್ಗೆ ಸ್ಪಷ್ಟತೆ ಸಿಗಲಿದೆ