ಬೆಂಗಳೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ಅಕ್ಕಿ ಕೊಡುವುದರಲ್ಲೂ ನೀವು ರಾಜಕಾರಣ ಮಾಡುತ್ತಿದ್ದೀರಲ್ಲಾ? ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸ್ತಾರೆ ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ K.M.ಶಿವಲಿಂಗೇಗೌಡ ವಾಗ್ದಾಳಿ ನಡೆಸಿದರು.
ಕೇಜ್ರಿವಾಲ್ ಏನು ಪ್ರಧಾನಿ ಕೇಳಿ ಉಚಿತ ಘೋಷಣೆ ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದಿದ್ದರು ಕೊಟ್ರಾ? ರಾಜ್ಯ ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ನೆರವಿಗೆ ಬರಬೇಕು. ಕಳೆದ ಬಾರಿ ಕೇಂದ್ರದಿಂದ ನೆರೆ ಹಣ ಬಂತಾ? ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ವೇಳೆ ಶಿವಲಿಂಗೇಗೌಡ ಮಾತಿಗೆ ಶಾಸಕ R.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸದನದಲ್ಲಿ ಆಡಳಿತ, ವಿಪಕ್ಷ ಸದಸ್ಯರ ನಡುವೆ ಗದ್ದಲ ಶುರುವಾಯಿತು.