ಬೆಂಗಳೂರು: “ಚಂದ್ರಯಾನ-3 ಚಂದ್ರನ ಕಡೆಗಿನ ತನ್ನ ಪ್ರಯಾಣವನ್ನು ಆರಂಭಿಸಿದೆ. ISRO ಮಹತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದ್ದು ಈ ಸಾಧನೆಗೆ ದೇಶದ ಅನೇಕ ಗಣ್ಯಾತಿ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.ದೇಶದ ಪ್ರಧಾನ ಮಂತ್ರಿ ಹಾಗೂ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರಿಂದ ಶುಭಾಶಯಗಳ ಸುರಿಮಳೆಗೈದಿದ್ದಾರೆ.
ಚಂದ್ರಯಾನ-3 ಯಶಸ್ವಿ ಉಡಾವಣೆಯಿಂದ ಇಸ್ರೋ ವಿಜ್ಞಾನಿಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಇಸ್ರೋ ವಿಜ್ಞಾನಿಗಳ ಪರಿಶ್ರಮ ಮತ್ತು ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಚಂದ್ರಯಾನ-3 ಭಾರತದ ಬಾಹ್ಯಾಕಾಶ ಸಾಹಸದಲ್ಲಿ ಹೊಸ ಅಧ್ಯಾಯ ಬರೆದಿದೆ. ಇದು ಪ್ರತಿಯೊಬ್ಬ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಎತ್ತರಕ್ಕೆ ಏರಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅವರ ಚೈತನ್ಯ ಮತ್ತು ಜಾಣ್ಮೆಗೆ ನನ್ನ ಅಭಿನಂದನೆ ಎಂದು ಪ್ರಧಾನಿ ಮೋದಿ (Narendra Modi) ಟ್ವೀಟ್ ಮಾಡಿದ್ದಾರೆ.
ಅಭಿನಂದನೆ ಎಂದು ಪ್ರಧಾನಿ ಮೋದಿ (Narendra Modi) ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಟ್ವೀಟ್ ಮಾಡಿ, ಚಂದ್ರಯಾನ-3 ಮಿಷನ್ ಯಶಸ್ವಿ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆಗಳು. ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಅಭಿನಂದಿಸಿದ್ದಾರೆ.
ಚಂದ್ರಯಾನ-3 ರ ಯಶಸ್ವಿ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆಗಳು. ಇಸ್ರೋ ವಿಜ್ಞಾನಿಗಳ ಸಾಧನೆಯ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ. ಒಂದು ಸಂಸ್ಥೆಯಾಗಿ ಇಸ್ರೋ ದೀರ್ಘಕಾಲದವರೆಗೆ ಜಾಗತಿಕ ಬಾಹ್ಯಾಕಾಶ ಸಮುದಾಯದಲ್ಲಿ ಭಾರತದ ಸ್ಥಾನವನ್ನು ಖಚಿತಪಡಿಸಿದೆ. ಅವರ ಅದ್ಭುತ ಸಾಧನೆಗೆ ನನ್ನ ನಮನಗಳು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು (H.D.Devegowda) ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.