ಮಂಡ್ಯ :- ಎಂಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಸಿ.ಜೋಗಿಗೌಡ ರವರು ಪ್ರಾಮಾಣಿಕವಾಗಿ ಶ್ರಮಿಸು ವಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಸಲಹೆ ನೀಡಿದರು. ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯ ಖಾಸಗಿ ಹೋಟೆಲಿನಲ್ಲಿ ಕೆ.ಸಿ.ಜೋಗಿಗೌಡ ಅವರಿಂದ ಅಭಿನಂದನೆ ಸ್ವೀಕರಿಸಿ ಗುರುವಾರ ಮಾತನಾಡಿದರು.
ಮಂಡ್ಯ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಶೇ. 70 ರಷ್ಟು ಭಾಗ ರೈತರೇ ಇರುವುದರಿಂದ ಇವರಿಗೆ ಅನುಕೂಲವಾಗುವ ವಿನೂತನ ಯೋಜನೆಗಳನ್ನು ಜಾರಿಗೆ ತಂದು ರೈತರನ್ನು ಆರ್ಥಿಕವಾಗಿ ಸಧೃಡರನ್ನಾಗಿ ಮಾಡಲು ಶ್ರಮಿಸುವಂತೆ ಕಿವಿಮಾತು ಹೇಳಿದರು.
ಇದೇ ವೇಳೆ ಅಧ್ಯಕ್ಷ ಜೋಗಿಗೌಡ ಮಾತನಾಡಿ ಬ್ಯಾಂಕ್ ನ ಅಭಿವೃದ್ಧಿಗೆ ಎಲ್ಲಾ ನಿರ್ದೇಶಕರ ವಿಶ್ವಾಸ ಪಡೆದು ಸರ್ಕಾರದಿಂದ ವಿಶೇಷ ಅನುದಾನ ತಂದು ಬ್ಯಾಂಕ್ ನ ಅಭಿವೃದ್ಧಿಗೆ ಶ್ರಮಿಸುವ ಮೂಲಕ ರೈತರು, ಷೇರುದಾರರು, ಕೂಲಿ ಕಾರ್ಮಿಕರಿಗೂ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ಕಾಡಾ ಮಾಜಿ ಅಧ್ಯಕ್ಷ ಶಿವಲಿಂಗಯ್ಯ, ಮತ್ತಿತರರು ಇದ್ದರು