ಭಟ್ಕಳ: ಮುರುಡೇಶ್ವರ ಬೀಚ್ ನಲ್ಲಿ ಕಳೆದ 2 ದಿನದ ಹಿಂದೆ ಅಲೆಗೆ ಸಿಕ್ಕು ಇಬ್ಬರು ಪ್ರವಾಸಿಗರು ಸಮುದ್ರಪಾಲಾದ ಹಿನ್ನೆಲೆ ಮುರ್ಡೇ ಶ್ವರ ಬೀಚ್ ಗೆ (Murudeshwar Beach) ಪ್ರವೇಶ ನಿರ್ಬಂಧಿಸಲಾಗಿದೆ. ಬಿಪಾಯ್ ಚಂಡಮಾರುತದ ಹಿನ್ನೆಲೆ ಅಲೆಗಳ ಅಬ್ಬರ ಜೋರಾಗಿದ್ದು, ಕಡಲ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಅಲರ್ಟ್ ಆಗಿದ್ದು, ಕಡಲ ತೀರಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿಲಾಗಿದೆ.
ಬೀಚ್ ಪ್ರವೇಶಿಸುವ ಎರಡು ಪ್ರವೇಶ ದ್ವಾರಗಳನ್ನು ಕೂಡ ಬಂದ್ ಮಾಡಲಾಗಿದೆ. ಸುಳಿ ಗಾಳಿ ಹಾಗೂ ಅಲೆಯ ಕಾರಣದಿಂದ ಸಮಸ್ಯೆ ಆಗುತ್ತಿರುವ ಹಿನ್ನೆಲೆ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಪ್ರವಾಸಿಗರ ವಿಚಾರದಲ್ಲಿ ಸಹ ಜಿಲ್ಲಾಡಳಿತ ಕಟ್ಟು ನಿಟ್ಟಾಗಿ ಕ್ರಮ ಕೈಗೊಳ್ಳುತ್ತಿದೆ. ಈ ಚಂಡಮಾರುತ ಹಾಗೂ ಮಳೆಯ ಹಿನ್ನೆಲೆ ಮುರುಡೇಶ್ವರ ಕಡಲತೀರದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ಇವತ್ತಿನಿಂದ ನಿಷೇಧ ಹೇರಿ ಜಿಲ್ಲಾಡಳಿತ ಆದೇಶ ನೀಡಿದೆ.