ಬೆಂಗಳೂರು: ಕಾಂಗ್ರೆಸ್ 5 ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಲ್ಲಿ 5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದಿದ್ದ ಸರ್ಕಾರ. ನಾಳೆಯಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಿದೆ. ಇದಕ್ಕೆ ನಾಳೆ(ಜು.10) ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ 2023-24ನೇ ಸಾಲಿನ ಬಜೆಟ್ ಮಂಡನೆಯನ್ನ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ. ಇನ್ನು ನಾಳೆಯಿಂದ ‘ಅನ್ನಭಾಗ್ಯ’ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿ ಬದಲು ಹಣ ಜಮೆ ಮಾಡಲು ಸಿಎಂ ಚಾಲನೆ ನೀಡಲಿದ್ದಾರೆ