ಬೆಂಗಳೂರು ;- 2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಆಫರ್ ಕುರಿತು ಸದನದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಸ್ತಾಪಿಸಿದ್ದಾರೆ.
2018ರಲ್ಲಿ ಚುನಾವಣೆ ಫಲಿತಾಂಶದ ಬಳಿಕ ಪ್ರಧಾನಿ ಮೋದಿ ಒಂದುವರೆ ಘಂಟೆಗಳ ಕಾಲ ಚರ್ಚಿಸಿದ ಬಗ್ಗೆ ಹೇಳಿದ್ದರು. ಬಳಿಕ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಸ್ಪಷ್ಟನೆ ನೀಡಿದ ಎಚ್ಡಿಕೆ ಪ್ರಧಾನಿ ಮೋದಿ ಗುಟ್ಟಾಗಿ ಆಫರ್ ಕೊಟ್ಟಿದ್ದನ್ನು ವಿಧಾನಸಭೆಯಲ್ಲಿ ಬಹಿರಂಗಪಡಿಸಿದ್ದಾರೆ. ನಮ್ಮ ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ನಾನು ಆ ದಿನ ಬಿಜೆಪಿಯೊಂದಿಗೆ ಸೇರಲಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸದನದಲ್ಲಿ ಹೇಳಿದ್ದಾರೆ.