ಬೆಂಗಳೂರು ;- ರಾಜಕಾಲುವೆಗಳ ತೆರವಿಗೆ ಸಮಗ್ರ ನೀತಿ ಜಾರಿ ಮಾಡದ ಹಿನ್ನೆಲೆ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಅಸಮಾಧಾನ ಹೊರ ಹಾಕಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿದೆ.
ಅಲ್ಲದೇ, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಜೊತೆಗೆ, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡುವ ಸಂದರ್ಭದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗದೇ ಕೈ ಕಟ್ಟಿ ಕುಳಿತುಕೊಂಡಿದ್ದ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ತಿಳಿಸಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಅಲ್ಲದೆ, ಒತ್ತವರಿ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಈವರೆಗೂ ಕೈಗೊಂಡಿರುವ ಕ್ರಮಗಳು ಕೇವಲ ಭಾಗಶಃ ಆಗಿವೆ. ಆದರೆ, ಸಮಗ್ರ ಯೋಜನೆಯನ್ನು ರೂಪಿಸಿಲ್ಲ ಎಂದು ಪೀಠ ತಿಳಿಸಿದೆ. ಪಾಲಿಕೆ ಅಧಿಕಾರಿಗಳು ನಿರೀಕ್ಷೆಯಂತೆ ಯಾವುದೇ ಸಮಗ್ರ ಯೋಜನೆಯನ್ನು ಜಾರಿ ಮಾಡಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.
![Demo](https://prajatvkannada.com/wp-content/uploads/2023/08/new-Aston-Band.jpeg)